ರಾಯಚೂರು | ವಕ್ಫ್ ಮಂಡಳಿಯ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2024-11-22 12:04 GMT

ರಾಯಚೂರು : ವಕ್ಫ್ ಬೋರ್ಡ್ ಹೆಸರಿನಲ್ಲಿ ರಾಜ್ಯದಲ್ಲಿ ರೈತರ ಜಮೀನು, ದೇಗುಲಗಳ ಆಸ್ತಿ ಕಬಳಿಕೆ ಹುನ್ನಾರ ಸರಕಾರ ಮಾಡುತ್ತಿದೆ ಎಂದು ಆರೋಪಿಸಿ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಶಾಂತಿ, ಸಾಮರಸ್ಯದ ನಾಡಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ರೈತರ, ಮಠ ಮಂದಿರದ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ದಾಖಲೆಗಳಲ್ಲಿ ಸೇರ್ಪಡೆ ಮಾಡಲಾಗುತ್ತಿರುವ ಬಗ್ಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಝಮೀರ್ ಅಹ್ಮದ್ ರಾಜ್ಯದ ಹಲವೆಡೆ ಭೇಟಿ ನೀಡಿ, ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿ ಸರಕಾರ ರೈತರ ಆಸ್ತಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಮುದಾಯವನ್ನು ಓಲೈಕೆ ಮಾಡಲು ಓಟ್ ಬ್ಯಾಂಕ್ ರಾಜಕಾರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ದೂರಿದರು.

ವಕ್ಫ್ ಬೋರ್ಡ್ ನಿಂದ ಆಗುತ್ತಿರುವ ಗೊಂದಲ ಸರಿಪಡಿಸಲು ರಾಜ್ಯ ಸರಕಾರ ಮುಂದಾಗದೇ ಅಧಿಕಾರಿಗಳ ಸಭೆ ನಡೆಸಿ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ. ಇದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ ಇದು ಮುಂದೊಂದು ದಿನ ರೈತರಿಗೆ ಮರಣ ಶಾಸನ ವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜಕುಮಾರ, ಶಿವಬಸ್ಸಪ್ಪ ಮಾಲಿ ಪಾಟೀಲ, ಸುಮಾ ಅಶೋಕ ಗಸ್ತಿ, ಡಾ.ನಾಗರಾಜ ಭಾಲ್ಕಿ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News