ರಾಯಚೂರು | ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2024-12-01 13:38 GMT
ರಾಯಚೂರು : ಇಲ್ಲಿನ ಲಿಂಗಸುಗೂರು ಕವಿತಾಳ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಬಸ್ ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.