ರಾಯಚೂರು | ಜಮೀನಿನಲ್ಲಿ ಬೆಳೆದ ಗಾಂಜಾ ಜಪ್ತಿ: ಆರೋಪಿ ಪರಾರಿ

Update: 2024-11-27 05:04 GMT

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ ಜಮಿನೊಂದರಲ್ಲಿ ಬೆಳೆದು ನಿಂತ ಅಂದಾಜು 10.200 ಕೆ.ಜಿ ಗಾಂಜಾ ಗಿಡಗಳನ್ನು ಪೊಲೀಸರು ಮಂಗಳವಾರ ಸಂಜೆ ಜಪ್ತಿ ಮಾಡಿಕೊಂಡಿದ್ದಾರೆ.

ಕಡದರಗಡ್ಡಿ ಗ್ರಾಮದ ಹುಲಗಪ್ಪ ಬಸಣ್ಣ (38) ನಾಯಕ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪಿ. ಈ ಬಗ್ಗೆ ಮಾಹಿತಿ ಪಡೆದ ಇನ್ ಸ್ಪೆಕ್ಟರ್ ಪುಂಡಲಿಕ್ ಪಟತ್ತರ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಂದಾಜು 10.200 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ವೆಂಕಟೇಶ ದೇಸಾಯಿ, ಪ್ರೊ. ಸೋಮಶೇಖರ ಬಳಗಾನೂರು ಸಮಕ್ಷಮದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News