ರಾಯಚೂರು | ಟ್ರ್ಯಾಕ್ಟರ್-ಬೈಕ್ ನಡುವೆ ಢಿಕ್ಕಿ : ಇಬ್ಬರು ಯುವತಿಯರು ಮೃತ್ಯು
Update: 2024-12-09 11:43 GMT
ರಾಯಚೂರು : ಟ್ರ್ಯಾಕ್ಟರ್ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಯುವತಿಯರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ದೀಪ (19) ,ಹಾಗೂ ತೇಜಸ್ವಿನಿ (20) ಎಂದು ಗುರುತಿಸಲಾಗಿದೆ.
ಆಕಾಶ್ (16) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂವರು ಒಂದೇ ಕುಟುಂಬದವರು ಎನ್ನಲಾಗಿದೆ.
ಸ್ಥಳಕ್ಕೆ ಹಟ್ಟಿ ಪೊಲೀಸ್ ಠಾಣೆಯ ಸಿಪಿಐ ಹೊಸಕೇರಪ್ಪ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.