ರಾಯಚೂರು | ಆಶ್ರಯ ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಒತ್ತಾಯ

Update: 2024-12-16 14:47 GMT

ರಾಯಚೂರು : ನಗರದ ಚಂದ್ರಬಂಡಾ ರಸ್ತೆಯಲ್ಲಿರುವ ಆಶ್ರಯ ಕಾಲೊನಿಯ ಸರ್ವೆ ನಂಬರ್ 572, 573 ಮತ್ತು 574 ರಲ್ಲಿ ವಾಸವಾಗಿರುವ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಆಶ್ರಯ ಕಾಲೊನಿ ನಿವಾಸಿಗಳ ಸಂಘದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

1991–92ನೇ ಸಾಲಿನಲ್ಲಿ ಆಶ್ರಯ ಯೋಜನೆಯಿಂದ ಮನೆಗಳು ನಿರ್ಮಿಸಿದ್ದು, ಮನೆಗಳನ್ನು ದುರಸ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಕುಡಿಯುವ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಹಾಗೂ ಯಾವುದೇ ಮೂಲಸೌಕರ್ಯ ಒದಗಿಸಿಲ್ಲ ಹಾಗೂ ಹಕ್ಕುಪತ್ರಕ್ಕಾಗಿ ಮನವಿ ಮಾಡಿದರೂ ಇಲ್ಲಿಯವರೆಗೆ ಹಕ್ಕು ಪತ್ರ ನೀಡಿಲ್ಲ ಎಂದು ದೂರಿದರು.

ಮನೆಯ ವಿದ್ಯುತ್ ರಶೀದಿ, ಆಧಾರ ಕಾರ್ಡ್, ಚುನಾವಣಾ ಐಡಿ ಕಾರ್ಡ್, ಬ್ಯಾಂಕ್, ರೇಷನ್ ಕಾರ್ಡನಲ್ಲಿಯೂ ಮನೆಗಳ ನಂಬರ್, ವಿಳಾಸ ಸೇರ್ಪಡೆಯಾಗಿವೆ, ಚುನಾವಣೆಯಲ್ಲಿ ಮತ ಚಲಾಯಿಸಿಕೊಂಡು ಬೇಡಿಕೆ ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.

ಹಕ್ಕುಪತ್ರಕ್ಕಾಗಿ 2014-15ರಲ್ಲಿ ಸುತ್ತೋಲೆ ಹೊರಡಿಸಿದೆ, 2015-16ರಲ್ಲಿ ಶಾಸಕರು ಸಮಿತಿ ಮಾಡಿ ಸಭೆ ನಡೆಸಿದ್ದಾರೆ. ಆದರೆ ಇತ್ತೀಚೆಗೆ ಕೆಲವು ಗುಂಡಾಗಳು ಮನೆ ಖಾಲಿ ಮಾಡುವಂತೆ ದೌರ್ಜನ್ಯ ಮಾಡುತ್ತಿದ್ದಾರೆ. ಕೂಡಲೇ 600 ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ನಿವಾಸಿಗಳಾದ ಗೋವಿಂದ ನಾಯಕ, ಆಶಪ್ಪ, ನಾಗೇಂದ್ರ, ಮೌನೇಶ, ಕೆ.ಬಸವರಾಜ, ಕೆ.ಮಲ್ಲೇಶ, ಅನ್ವರ್ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News