ರಾಯಚೂರು | ಅರ್ಹ ನೆರೆ ಸಂತ್ರಸ್ತರಿಗೆ ವಸತಿ ಸೌಕರ್ಯ ಕಲ್ಪಿಸಲು ಒತ್ತಾಯ

Update: 2024-11-21 13:54 GMT

ರಾಯಚೂರು : ದೇವದುರ್ಗ ತಾಲ್ಲೂಕಿನ ಹೇರುಂಡಿ ಗ್ರಾಮದ ನೆರೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಿದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಹೇರುಂಡಿ ಗ್ರಾಮದಲ್ಲಿ 2009ರ ಸೆಪ್ಟಂಬರ್ ಹಾಗೂ ಅಕ್ಟೋಬರ್ ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕರು ಮನೆ ಕಳೆದುಕೊಂಡಿದ್ದಾರೆ. ಬಳಿಕ ಸರ್ವೆ ಮಾಡಿ ಅರ್ಹ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಬದಲು ರಾಜಕೀಯ ನಾಯಕರು ತಿಳಿಸಿದ ಫಲಾನುಭವಿಗಳ ಪಟ್ಟಿ ತಯಾರಿಸಿದ್ದಾರೆ. ಗ್ರಾಮ ಪಂಚಾಯತ್ ಅಧಿಕಾರಿಗಳು ನೈಜ ಫಲಾನುಭವಿಗಳನ್ನು ಗುರುತಿಸದೇ ಹಣ ನೀಡಿದವರ ಹೆಸರು ಸೇರಿಸಿ ಹಕ್ಕು ಪತ್ರ ನೀಡಿದ್ದಾರೆ ಎಂದು ದೂರಿದರು.

ಮಳೆಯಿಂದ ಒಟ್ಟು 159 ಮನೆಗಳು ಹಾನಿಯಾಗಿದ್ದು, ಕೇವಲ 109 ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ಉಳಿದ 50 ಕುಟುಂಬಗಳಿಗೂ ಮನೆಗಳನ್ನು ನಿರ್ಮಿಸಿ ನ್ಯಾಯ ಒದಗಿಸಬೇಕು ಎಂದ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಮನ್ನಾಪೂರು, ಮುಖಂಡರಾದ ಆಂಜನೇಯ, ಹೊನ್ನಪ್ಪ ಗುಂಡುಗುರ್ತಿ, ಲಕ್ಷ್ಮಣ ಮಸರಕಲ್, ಯಲ್ಲಪ್ಪ ಹೇರುಂಡಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News