ರಾಯಚೂರು | ಶಾಲಾ ಜಾಗದಲ್ಲಿ ಅಕ್ರಮ ದೇವಸ್ಥಾನ ನಿರ್ಮಾಣ; ತೆರವುಗೊಳಿಸಿದ ಜಿಲ್ಲಾಡಳಿತ

Update: 2024-11-20 08:58 GMT

ರಾಯಚೂರು: ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಮಂಗಳವಾರ ಮಧ್ಯರಾತ್ರಿ ಪೊಲೀಸರು ಬಿಗಿ ಬಂದೋಬಸ್ತ್ ನಲ್ಲಿ ತೆರವುಗೊಳಿಸಿದರು.

ನಗರಸಭೆಯವರು ಮೂರು ಕ್ರೇನ್ ಬಳಸಿ ಇಟ್ಟಿಗೆಯಿಂದ ನಿರ್ಮಿಸಿದ ಶೆಡ್ಡನ್ನೂ ತೆರವು ಮಾಡಿದರು. ಶಾಲಾ‌ಜಾಗದಲ್ಲಿ ಇಟ್ಟಿದ್ದ ನಾಗರ ಮೂರ್ತಿಗಳನ್ನು ಕಾರಿನಲ್ಲಿ ಸುರಕ್ಷಿತವಾಗಿ ತೆಗೆದುಕೊಂಡು ಹೋದರು.

ಚಂದ್ರಬಂಡಾ ರಸ್ತೆಯ ಎಲ್‌ಬಿಎಸ್ ನಗರದ ಸಂತೋಷ್‌ ಬಡಾವಣೆಯ ಸರ್ವೆ ನಂ. 784/1 ರಲ್ಲಿ ವಸತಿ ಬಡಾವಣೆಗೆ ನಾಗರಿಕ ಸೌಲಭ್ಯದ ಕೋಟಾದಡಿ ಎಲ್ ಬಿ ಎಸ್ ನಗರದ ಸರ್ಕಾರಿ ಪ್ರೌಢ ಶಾಲೆಗೆ (ಕನ್ನಡ ಮಾಧ್ಯಮ) ಶಾಲಾ ಕಟ್ಟಡಕ್ಕಾಗಿ ಮೀಸಲಿಡಲಾಗಿದೆ. 1017 ಚದರ ಮೀಟರ್‌ಗಿಂತ ಅಧಿಕ ಖಾಲಿ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ವ್ಯಕ್ತಿಗಳು ಸರ್ಕಾರಿ ಜಾಗದಲ್ಲಿ ಮನೆ ಕಟ್ಟುವ ಸಂದರ್ಭದಲ್ಲಿ ಅಕ್ರಮವಾಗಿ ಟಿನ್ ಶೆಡ್‌ ನಿರ್ಮಾಣ ಮಾಡಿದ್ದಾರೆ. ಅದಕ್ಕೆ ದೇವಸ್ಥಾನ ಮತ್ತು ದೇವರ ಸ್ವರೂಪವನ್ನು ನೀಡಿ ದೇವರ ಹೆಸರಿನಲ್ಲಿ ಸರ್ಕಾರಿ ಜಾಗವನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು , ಜಿಲ್ಲಾಧಿಕಾರಿಯವರ ಗಮನಕ್ಕೆ ತಂದಿದ್ದರು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತವೇ ತೆರವುಗೊಳಿಸಲು ಮುಂದಾಗಿದ್ದು, 15 -20 ದಿನದಲ್ಲಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಅದನ್ನು ಮಂಗಳವಾರ ರಾತ್ರಿ ಕಟು ಬದ್ಧವಾಗಿ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಿದರು.

ಹೋರಾಟಗಾರರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ, ಸಂಬಂಧಪಟ್ಟ ಶಿಕ್ಷಣ ಇಲಾಖೆಯ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳ ಮತ್ತು ಸಚಿವರ ಗಮನಕ್ಕೆ ತಂದಿದ್ದರು ಅದು ಇಂದು ಕೊನೆಯಾಗಿದೆ ಎನ್ನಲಾಗಿದೆ.


Delete Edit

ಶಾಲಾ ಜಾಗದಲ್ಲಿ ನಿರ್ಮಿಸಲಾದ ಅಕ್ರಮ ದೇವಸ್ಥಾನ ತೆರವುಗೊಳಿಸುವ ಮುನ್ನ

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News