ರಾಯಚೂರು | ಹಸುವಿನ ಕೆಚ್ಚಲು ಕೊಯ್ದ ಪ್ರಕರಣ : ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Update: 2025-01-15 10:09 GMT

ರಾಯಚೂರು : ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೋವುಗಳನ್ನು ಹಿಡಿದು ನಗರದ ನ್ಯಾಯಾಲಯ, ಟಿಪ್ಪು ಸರ್ಕಲ್ ಮೂಲಕ ಗೋಶಾಲೆವರೆಗೆ ಮೆರವಣಿಗೆ ನಡೆಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಗೋಮಾತೆಯ ಕೆಚ್ಚಲು ಕತ್ತರಿಸುವ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಗೆ ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವಂತಹ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರಕಾರ ಮಾಡುತ್ತಿದ್ದು, ಗೋಮಾತೆಯ ಶಾಪ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ನಾಯಕರಿಗೆ ತಟ್ಟಲಿದೆ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಕಡಗೋಲ ಆಂಜನೇಯ್ಯ, ರವೀಂದ್ರ ಜಲ್ದಾರ್, ರಾಘವೇಂದ್ರ ಉಟ್ಕೂರು, ಪಿ.ಯಲ್ಲಪ್ಪ, ಕಡಗೋಲ ರಾಮಚಂದ್ರ, ರಾಜಕುಮಾರ, ಶರಣಮ್ಮ ಕಾಮರೆಡ್ಡಿ, ನರಸರೆಡ್ಡಿ, ರಮಾನಂದ ಯಾದವ, ಮೌನೇಶ, ಅನಿತಾ, ಅಶ್ವಿನಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News