ರಾಯಚೂರು | ಕ್ರೂಸರ್ - ಲಾರಿ ಢಿಕ್ಕಿ: ಇಬ್ಬರು ಮೃತ್ಯು, ನಾಲ್ವರಿಗೆ ಗಾಯ
Update: 2025-01-12 16:35 GMT
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪದ ಎಮ್ಮೇರಹಳ್ಳಿ ಸೇತುವೆ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಕೂಲಿ ಕೆಲಸಕ್ಕಾಗಿ ರಾಯಚೂರು ಜಿಲ್ಲೆಯ ಮಾನ್ವಿಯಿಂದ ಪ್ರಯಾಣ ಬೆಳೆಸಿದ್ದು, ಬೆಳಗಿನ ಜಾವ 5:30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿಯಾದ ಪರಿಣಾಮ ಕ್ರೂಸರ್ ಚಾಲಕ ಬಸವರಾಜು (40), ಸುರೇಶ್ (28) ಮೃತರಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.