ರಾಯಚೂರು | ಬಾಣಂತಿ ಸಾವು ಪ್ರಕರಣ : ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ ಭೇಟಿ
ರಾಯಚೂರು : ತಾಲ್ಲೂಕಿನ ರಬ್ಬಣಕಲ್ ಗ್ರಾಮದಲ್ಲಿ ಬಾಣಂತಿ ಈಶ್ವರಿ (32) ರಕ್ತಸ್ರಾವದಿಂದ ಶುಕ್ರವಾರ ಮೃತಪಟ್ಟಿದ್ದ ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿಗಳ ಅವಶ್ಯಕತೆಯಿದ್ದು, ಆಸ್ಪತ್ರೆಗೆ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ನಿತೀಶ್ ಕೆ. ಮಾತನಾಡಿ, ಆಸ್ಪತ್ರೆಯನ್ನು ಮೇಲ್ದಾರ್ಜೆಗೆ ಏರಿಸಲಾಗಿದ್ದು, ಮುಂದಿನ ದಿನಗಳಲ್ಲಿ ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ನೇಮಿಸಿ ಇಲ್ಲಿಯೇ ಹೆರಿಗೆ ಮಾಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ನಂದಿತಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ರಾಯಚೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್, ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.