ರಾಯಚೂರು | ಕಾಲುವೆಯ ಕೊನೆ ಭಾಗದ ರೈತರಿಗೆ ನೀರು ತಲುಪಿಸಿ : ಸಚಿವ ಎನ್.ಎಸ್.ಬೋಸರಾಜು

Update: 2025-01-03 15:07 GMT

ರಾಯಚೂರು : ನೀರಾವರಿ ಸಲಹಾ ಸಮಿತಿಯ ನಿರ್ಧಾರದಂತೆ ತುಂಗಭದ್ರಾ ಎಡದಂಡೆಯ ಕಾಲುವೆಯಲ್ಲಿ ಹರಿಸಲಾಗುತ್ತಿರುವ 3800 ಕ್ಯೂಸೆಕ್ಸ್ ನೀರು ರಾಯಚೂರು ಜಿಲ್ಲೆಯ ಕೊನೆಯ ಭಾಗದ ಕಾಲುವೆಯ ರೈತರಿಗೂ ಸಮರ್ಪಕವಾಗಿ ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು ಸೂಚನೆ ನೀಡಿದರು .

ಹೊಸಪೇಟೆಯಲ್ಲಿಂದು ತುಂಗಭದ್ರಾ ಆಣೆಕಟ್ಟಿನ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ ಅವರು, ಜ1 ರಿಂದ ಎಡದಂಡೆ ಕಾಲುವೆಯಲ್ಲಿ 3800 ಕ್ಯೂಸೆಕ್ಸ್ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಇದರಂತೆ ಕಾಲುವೆಯಲ್ಲಿ ನೀರನ್ನು ಹರಿಬಿಡಲಾಗಿದ್ದು, ಎಲ್ಲಾ ಭಾಗದ ರೈತರಿಗೆ ಈ ನೀರು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಇದರಿಂದ ಬೆಳೆ ಹಾನಿಯಾಗುವ ಆತಂಕದಿಂದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಭಾಗಕ್ಕೂ ಸಮರ್ಪಕವಾಗಿ ನೀರು ದೊರೆಯಲು ಗೇಜ್ ಮೆಂಟೇನ್ ಮಾಡುವುದು ಬಹಳ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.

ದೂರವಾಣಿ ಮೂಲಕ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರೊಂದಿಗೆ ಮಾತನಾಡಿದ ಸಚಿವರು, ಸಮರ್ಪಕ ನೀರು ನಿರ್ವಹಣೆಯ ನಿಟ್ಟಿನಲ್ಲಿ ಗುಲ್ಬರ್ಗಾ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡುವಂತೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ಜಿಲ್ಲೆಗಳ ಮಧ್ಯೆ ಸಮನ್ವಯತೆ ಸಾಧಿಸಬೇಕು. ನೀರು ಎಲ್ಲಾ ಭಾಗದ ರೈತರಿಗೂ ಸಮರ್ಪಕವಾಗಿ ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದು ದೂರವಾಣಿ ಮೂಲಕ ಸೂಚನೆ ನೀಡಿದರು. ಮುಂದಿನ 10 ದಿನಗಳು ಬಹಳ ಪ್ರಮುಖವಾಗಿದ್ದು, 69 ಮೈಲು ಕಾಲುವೆಯ ಕೊನೆಯ ಭಾಗದ (ಟೈಲ್ ಎಂಡ್) ರೈತರಿಗೂ ಸಮರ್ಪಕ ನೀರು ದೊರೆಯುವದನ್ನ ಖಾತ್ರಿ ಪಡಿಸಿಕೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಕೊಪ್ಪಳ ಸಂಸದರಾದ ರಾಜಶೇಖರ್ ಬಸವರಾಜ ಹಿಟ್ನಾಳ್, ತುಂಗಭದ್ರಾ ಅಣೆಕಟ್ಟಿನ ಮುಖ್ಯ ಅಭಿಯಂತರರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News