ರಾಯಚೂರು | ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವಸ್ಥಾನ ನೀಡಲು ಆಗ್ರಹ
ರಾಯಚೂರು : ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಆದೋನಿ ಆದಿರಾಜ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಕಾಂಗ್ರೇಸ್ ಪಕ್ಷದಿಂದ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ಚಾಮರಾಜ ನಗರದಲ್ಲಿ ಜನಪ್ರಿಯ ಶಾಸಕರಾಗಿ ಸೇವೆ ಸಲ್ಲಿಸತ್ತಿದ್ದಾರೆ. ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕಾ ಶಾಸಕರು ಇವರಾಗಿದ್ದು ನಮ್ಮ ರಾಜ್ಯದ ಉಪ್ಪಾರ ಸಮಾಜದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಇವರೊಬ್ಬರೇ ಏಕೈಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದುಳಿದೆ ಸಮಾಜದ ವ್ಯಕ್ತಿಯಾದ ಸಿ.ಪುಟ್ಟರಂಗಶೆಟ್ಟಿ ರವರಿಗೆ ಸಚಿವಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಷ್ಟ್ರೀಯ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್. ಬಗ್ಗಾರೆಡ್ಡಿ, ಅಮರೇಶ ಆದೋನಿ, ಈರೇಶ, ಪಾಂಡುರಂಗ, ಸಿದ್ಧಲಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.