ರಾಯಚೂರು | ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಂದ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿಗೆ ಆಸಕ್ತರು ಇದೇ ಡಿ.28ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ ನಿಜಲಿಂಗಪ್ಪ ಕಾಲೋನಿ, ರಾಯಚೂರು-584101 ಅಥವಾ ದೂರವಾಣಿ ಸಂಖ್ಯೆ: 08532-200677ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.