ರಾಯಚೂರು | ಡಿ.21ರಂದು ಉದ್ಯೋಗ ವಿನಿಮಯ ಇಲಾಖೆಯಿಂದ ನೇರ ಸಂದರ್ಶನ
ರಾಯಚೂರು : ರಾಯಚೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಹಾಗೂ ಐಕಾನ್ ಕಂಪ್ಯೂಟರ್ ಇನ್ಸ್ ಟಿಟ್ಯೂಟ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶೇಖರ ಫರಾಡಯ್ಸ ಹತ್ತಿರದ ಐಕಾನ್ ಕಂಪ್ಯೂಟರ್ ಇನ್ಸ್ ಟಿಟ್ಯೂಟ್ ನಲ್ಲಿ ಡಿ.21ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿಲಾಗಿದ್ದು, ಆಸಕ್ತ ಯುವಕ ಅಥವಾ ಯುವತಿಯರು ಭಾಗವಹಿಸಿ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ 4ವಿವಿಧ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಆಯೋಜನೆ ಮಾಡಲಾಗಿದ್ದು, ತಮ್ಮ ಕಂಪನಿಯಲ್ಲಿ ಖಾಲಿವಿರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
ಎಸೆಸೆಲ್ಸಿ, ಪಿ.ಯು.ಸಿ. ಹಾಗೂ ಎಲ್ಲಾ ಪದವೀಧರ 18ರಿಂದ 32ವರ್ಷಗಳವರೆಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಉದ್ಯೋಗವಕಾಶಕ್ಕಾಗಿ ತಮ್ಮ ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 08532-231684, 7406819148, 9042793334 8095125775, 9008211750ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.