ರಾಯಚೂರು | ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ: ಜಿಲ್ಲಾಧಿಕಾರಿ ನಿತೀಶ್ ಕೆ.

ನಿತೀಶ್ ಕೆ.
ರಾಯಚೂರು : ಇಲ್ಲಿನ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯ ಪಡಿತರ ಚೀಟಿ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/ಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಡೀಲರ್‌ಗಳಿಗೆ ಸಲ್ಲಿಸಲು ತಿಳಿಸಲಾಗಿದೆ.
ಈ ಕಾರ್ಯಾಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಮಾನ್ಯ ಆಯುಕ್ತರ ಕಚೇರಿಯ ಟ್ರೋಲ್ ಪ್ರೀ ದೂಡಿವಾಣಿ ಸಂಖ್ಯೆ: 1967ಗೆ ಅಥವಾ ಆಹಾರ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಸಂಬಂಧಪಟ್ಟ ತಾಲ್ಲೂಕು ಆಹಾರ ಶಾಖೆ ಕಚೇರಿಗೆ ದೂರು ಸಲ್ಲಿಸಬಹುದಾಗಿದೆ