ರಾಯಚೂರು | ವೃದ್ದೆಯನ್ನು ಚಾಕುವಿನಿಂದ ಇರಿದು ಹತ್ಯೆ
Update: 2025-03-21 16:50 IST

ಸಾಂದರ್ಭಿಕ ಚಿತ್ರ
ರಾಯಚೂರು : ನಗರದ ಸ್ಟೇಷನ್ ಬಜಾರ್ ಏರಿಯಾದ ಗೂಡ್ ಶೆಡ್ ಬಳಿ ಸುಮಾರು 70 ವರ್ಷದ ವೃದ್ದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ ಮತ್ತು ಕೊಲೆ ಮಾಡಿದವರು ಯಾರೂ ಎಂಬುವುದು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ರೈಲ್ವೆ ಹಾಗೂ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.