ರಾಯಚೂರು | ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡಿ : ರಾಹುಲ್ ತುಕಾರಾಂ

Update: 2024-12-21 10:18 GMT

ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಚಾಗಬಾವಿ ಗ್ರಾಮದಲ್ಲಿ ಪಿ.ಆರ್.ಇ.ಡಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ದ್ರವ ತ್ಯಾಜ್ಯ ವಿಲೇವಾರಿ ಹಾಗೂ ಚರಂಡಿ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯು ವೈಜ್ಞಾನಿಕವಾಗಿ ಕೂಡಿರಬೇಕು ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಿ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮದಲ್ಲಿ ಸ್ವಚ್ಚತಾ ಕಾಪಾಡಲು ಅಗತ್ಯ ಕ್ರಮ ಜರುಗಿಸಬೇಕು. ಗ್ರಾಮಸ್ಥರಿಗೆ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಬೇಕು. ನೀರು ಪೋಲಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದರು.

ಗ್ರಾಮ ಪಂಚಾಯತ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಲಾ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ್ ಸ್ವಾಮಿ, ನರೇಗಾ ಸಹಾಯಕ ನಿರ್ದೇಶಕರಾದ ಮಂಜುನಾಥ ಜಾವೂರ್, ಪಿ.ಆರ್.ಇ.ಡಿ ಎಇಇ, ಟಿಎಇ ಹಾಗೂ ನರೇಗಾ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News