ರಾಯಚೂರು | ಪ್ರತಿಯೊಬ್ಬ ಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ: ಕೆ.ವಿ ಸುರೇಂದ್ರ ಕುಮಾರ

Update: 2025-01-11 11:30 GMT

ರಾಯಚೂರು : ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಗ್ರಾಹಕರಿಗೆ ಸಂಬಂಧಿಸಿದ ಕಾನೂನುಗಳು ಜಾರಿಯಾದ ಮೇಲೆ ವಂಚನೆಗಳಿಗೆ ಕಡಿವಾಣ ಹಾಕಲು ಸಾಧ್ಯವಾಯಿತು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಅವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ʼರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮʼ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಗ್ರಾಹಕರಿಗೂ ಕಾನೂನಿನ ಅರಿವು ಇರಬೇಕು ಮತ್ತು ಮಾನವೀಯ ಮೌಲ್ಯಗಳೊಂದಿಗೆ ಜೀವಿಸಬೇಕು ಎಂದು ಸಲಹೆ ಮಾಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಮಾತನಾಡಿ, ಗ್ರಾಹಕರು ಮಾಡುವಂತ ಅನೇಕ ವ್ಯವಹಾರಗಳ ಪೈಕಿ ಕೆಲವೊಂದು ವ್ಯವಹಾರಗಳಲ್ಲಿ ಆಗುವ ಅನ್ಯಾಯದಿಂದ ಪಾರಾಗಲು ಕಾನೂನು ಜಾಗೃತಿ ಅಗತ್ಯ ಎಂದು ಸಲಹೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಯಂಕಣ್ಣ ಮಾತನಾಡಿ, ಗ್ರಾಹಕರು ಕೊಳ್ಳುವ ಸರಕುಗಳಿಗೆ ತಪ್ಪದೇ ಬಿಲ್ಲುಗಳನ್ನು ಪಡೆದು ವ್ಯವಹರಿಸುವುದು ಸೂಕ್ತ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News