ರಾಯಚೂರು | ಬಿಳಿಜೋಳ ಖರೀದಿಗೆ ಜೂ.30 ರವರೆಗೆ ಅವಧಿ ವಿಸ್ತರಣೆ : ಜಿಲ್ಲಾಧಿಕಾರಿ ನಿತೀಶ್ ಕೆ.
Update: 2025-04-03 16:01 IST

ರಾಯಚೂರು : ಇಲ್ಲಿನ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿ ಜೋಳ ಖರೀದಿಸುವ ಅವಧಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೊರ್ಸ್ ಸಮಿತಿಯ ಅಧ್ಯಕ್ಷರಾದ ಹಾಗೂ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಬಿಳಿಜೋಳವನ್ನು ಮಾರಾಟ ಮಾಡಲು ಮಾ.31 ರವರೆಗೆ ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ರೈತರಿಂದ ಖರೀದಿಸುವ ಅವಧಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದ್ದು, ರೈತರು ತಮ್ಮ ಹತ್ತಿರದಲ್ಲಿರುವ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಎಫ್‌ಎಕ್ಯೂ ಗುಣಮಟ್ಟದ ಮುಂಗಾರು ಬಿಳಿಜೋಳವನ್ನು ಈಗಾಗಲೇ ನೋಂದಣಿ ಮಾಡಿಸಿಕೊಂಡಿರುವ ರೈತರು ಖರೀದಿ ಕೇಂದ್ರಗಳಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.