ರಾಯಚೂರು | ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಚರಣೆಯಲ್ಲಿ ತಾರತಮ್ಯ ಖಂಡಿಸಿ ಉಪವಾಸ ಸತ್ಯಾಗ್ರಹ
ರಾಯಚೂರು : ಜಿಲ್ಲೆಯ ಸಿಂಧನೂರಿನಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಸಿಂಧನೂರಿನ ತಹಶೀಲ್ದಾರ್ ಕಚೇರಿ ಮುಂದೆ ಬೀದಿ ಬದಿಯ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ ಆರಂಭವಾಯಿತು.
ಸಣ್ಣಪುಟ್ಟ ವ್ಯಾಪಾರಿಗಳನ್ನು ಮಾತ್ರ ಒಕ್ಕಲೆಬ್ಬಿಸಿರುವ ಅಧಿಕಾರಿ ವರ್ಗ ಶ್ರೀಮಂತರ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸದೆ ಮೌನವಾಗಿದೆ. ಎಲ್ಲಾ ಕ್ರಮಗಳನ್ನು ತೆರವುಗೊಳಿಸಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.
ಈಚೆಗೆ ಹಮ್ಮಿಕೊಂಡಿದ್ದ ಹೋರಾಟದ ಸಂದರ್ಭದಲ್ಲಿ ತಹಶೀಲ್ದಾರರು ಮಂಗಳವಾರ ಸಭೆ ಕರೆಯುವುದಾಗಿ ಹೇಳಿದ್ದರು. ಆದರೆ ಆ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಇರುವುದರಿಂದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೇವೆ ಎಂದು ಹೋರಾಟಗಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರರಾದ ನಾಗರಾಜ್ ಪೂಜಾರ್ ಬಸವರಾಜ್ ಬಾದರ್ಲಿ, ಡಾ.ವಶೀಮ್, ಬಿ ಎನ್ ಎರದಿಹಾಳ ರಹೀಂ ಮೆಕಾನಿಕ್, ಚಿಟ್ಟಿಬಾಬು, ಮಂಜುನಾಥ ಗಾಂಧಿ ನಗರ, ಅಶೋಕ ನಂಜಲದಿನ್ನಿ ಇದ್ದರು