ರಾಯಚೂರು | ಔಷಧಿ ನಿಯಂತ್ರಕರ ಕಚೇರಿಯಲ್ಲಿ ಬೆಂಕಿ ಅವಘಡ : ಅಪಾರ ಹಾನಿ
Update: 2025-01-13 13:50 GMT
ರಾಯಚೂರು : ನಗರದ ಆಶಾಪುರ ರಸ್ತೆಯ ಆರ್.ಆರ್.ಕಾಲೋನಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರ ಕಚೇರಿಯಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಕಚೇರಿಯಲ್ಲಿನ ಕಂಪ್ಯೂಟರ್ ಹಾಗೂ ಕಡತಗಳು ಸುಟ್ಟಿವೆ. ಬೆಂಕಿ ಹೊತ್ತಿಕೊಂಡು ಹೊಗೆ ಬರುತ್ತಿದ್ದನ್ನು ಕಂಡ ಜನರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದರು.
ಬಳಿಕ ಅಗ್ನಿಶಾಮದ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ.
ಕಚೇರಿಯಲ್ಲಿನ ಮಹತ್ವದ ದಾಖಲೆಗಳು ಬೆಂಕಿಗಾಹುತಿಯಾಗಿವೆ. ಜಿಲ್ಲೆಯ ಔಷಧಿ ಅಂಗಡಿಗಳ ಹಾಗೂ ಇಲಾಖೆಗೆ ಸಂಬಂಧಿಸಿದ ದಾಖಲೆಗಲು ಭಾಗಶಃ ಸುಟ್ಟಿವೆ. ಕಚೇರಿಯಲ್ಲಿದ್ದ ಕಂಪ್ಯೂಟರ್ಗಳು, ಪ್ರಿಂಟರ್, ಪೀಠೋಪಕರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.
ಈ ಕುರಿತು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.