ರಾಯಚೂರು | ಒಂದೇ ಕುಟುಂಬದ ನಾಲ್ವರು ಮೃತ್ಯು: ವಿಷಪೂರಿತ ಆಹಾರ ಸೇವನೆ ಶಂಕೆ:

Update: 2024-08-02 05:52 GMT

ರಾಯಚೂರು, ಆ.2: ಕಳೆದ ರಾತ್ರಿ ಮಾಂಸದೂಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಭೀಮಣ್ಣ(60), ಅವರ ಪತ್ನಿ ಈರಮ್ಮ (54), ಮಕ್ಕಳಾದ ಮಲ್ಲೇಶ (19) ಹಾಗೂ ಪಾರ್ವತಿ (17) ಮೃತಪಟ್ಟವರು. ಇನ್ನೋರ್ವ ಪುತ್ರಿ ಮಲ್ಲಮ್ಮ(18) ಎಂಬವರ ಸ್ಥಿತಿ ಗಂಭೀರವಾಗಿದ್ದು, ಅವರು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಕಳೆದ ರಾತ್ರಿ ಕುರಿ ಮಾಂಸದೂಟ ಮಾಡಿದ್ದರೆನ್ನಲಾಗಿದ್ದು, ಬಳಿಕ ತೀವ್ರ ಅಸ್ವಸ್ಥಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ನಾಲ್ವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಒಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ರಿಮ್ಸ್ನಲ್ಲಿ ಕೊನೆಯುಸಿರೆಳೆದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಿಷಪೂರಿತ ಆಹಾರ ಸೇವನೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೇಲ್ನೋಟಕ್ಕೆ

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ತನಿಖೆಯ ಬಳಿಕ ನಿಖರ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News