ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ : ನರಸಪ್ಪ ದಂಡೋರಾ

Update: 2024-12-02 13:53 GMT

ರಾಯಚೂರು : ಜಾತಿಗಳ ಒಳಮೀಸಲಾತಿ ವಗೀಕರಣಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಜಾರಿಗೊಳಿಸಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ, ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ(ಎಂಆರ್ ಎಚ್ ಎಸ್) ರಾಜ್ಯಾಧ್ಯಕ್ಷ ನರಸಪ್ಪ ದಂಡೋರಾ ಎಚ್ಚರಿಸಿದ್ದಾರೆ.

ಎಂಆರ್ ಎಚ್ ಎಸ್ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಕಳೆದ 30 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗಾಗಿ ಎರಡು ತಿಂಗಳು ಕಾಲಾವಕಾಶವನ್ನು ಪಡೆದಿದ್ದಾರೆ. ಅದನ್ನು ಒಂದು ತಿಂಗಳೊಳಗಾಗಿ ಜನಸಂಖ್ಯಾ ಆಧಾರದ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಒಳಮೀಸಲಾತಿಗೆ ಕಾಂಗ್ರೆಸ್‌ನ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಎಚ್.ಸಿ ಮಹದೇವಪ್ಪ ಅವರೇ ಆಕ್ಷೇಪಿಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ನಿರ್ಮಾಣಗೊಂಡರೆ, ಮಾದಿಗ ಸಮುದಾಯದ ಕಾಂಗ್ರೆಸ್ ಪಕ್ಷದ ನಾಯಕ ಕೆ.ಎಚ್ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅವರನ್ನು ಕಡೆಗಣಿಸಿದರೆ, ಮಾದಿಗ ಸಮುದಾಯಕ್ಕೆ ಅನ್ಯಾಯವೆಸಗಿದಂತಾಗುತ್ತದೆ ಎಂದು ಹೇಳಿದರು.

ಸಂಘಟನೆಯ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ, ಜಿಲ್ಲಾ ಘಟಕ ಅಧ್ಯಕ್ಷ ಮಾನಪ್ಪ ಮೇಸ್ತ್ರೀ, ಪದಾಧಿಕಾರಿಗಳಾದ ದುಳ್ಳಯ್ಯ ಗುಂಜಳ್ಳಿ, ರಂಜೀತ್ ದಂಡೋರಾ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News