ರಾಯಚೂರು | ಬಾಲಕಿಯ ಅಪಹರಿಸಿ ಅತ್ಯಾಚಾರ ಆರೋಪ; ಯುವಕನ ಬಂಧನ

Update: 2025-01-05 16:58 GMT

ಸಾಂದರ್ಭಿಕ ಚಿತ್ರ | freepik.com

ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನ ಅಮಿಮಗಡ ಗ್ರಾಮದಲ್ಲಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ.

10 ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಹಾಗೂ ಚಿತ್ರಹಿಂಸೆ ನೀಡಿರುವುದಾಗಿ ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ನ.2 ರಂದು ಬಾಲಕಿಯನ್ನು ಅಪಹರಣ ಮಾಡಿ ನಂತರ ಎರಡು ದಿನ ಕೂಡುಹಾಕಿ, ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ರಸ್ತೆಯಲ್ಲಿ ಹೋಗುವಾಗ ಕಾರಿನಲ್ಲಿ ಬಂದ ಅದೇ ಗ್ರಾಮದ ಹುಚ್ಚರೆಡ್ಡೆಪ್ಪ, ಹುಚ್ಚಪ್ಪ, ಚನ್ನಬಸವ ಎಂಬುವವರು ಅಪಹರಣ ಮಾಡಿದ್ದಾರೆ. ಹುಚ್ಚರೆಡ್ಡಿ ಎಂಬಾತನಿಂದ ನಿರಂತರ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ಇದಲ್ಲದೇ ಹುಚ್ಚಪ್ಪ ಎಂಬ ವ್ಯಕ್ತಿ ಸಿಗರೇಟಿನಿಂದ ಬಾಲಕಿಗೆ ಸುಟ್ಟು ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆರೋಪಿ ಹುಚ್ಚರೆಡ್ಡೆಪ್ಪ ಎಂಬಾತನನ್ನು ಪೊಲೀಸರ್ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಐದು ಜನ ಆರೋಪಿಗಳು ಬಾಲಕಿಯನ್ನು ಅಪಹರಿಸಿದ್ದಾರೆ ಎಂದು ಹೇಳಲಾಗಿದೆ.

ಬಾಲಕಿಗೆ ಕಿರುಕುಳ ನೀಡಿದ್ದ ಇನ್ನುಳಿದ ಆರೋಪಿಗಳ ಬಂಧನವಾಗಬೇಕು ಎಂದು ಬಾಲಕಿಯ ಪೋಷಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News