ರಾಯಚೂರು | ಬೈಕ್ ಗೆ ಲಾರಿ ಢಿಕ್ಕಿ; ಸ್ಥಳದಲ್ಲಿಯೇ ಸವಾರ ಮೃತ್ಯು
Update: 2025-03-18 22:12 IST

ಸಾಂದರ್ಭಿಕ ಚಿತ್ರ
ರಾಯಚೂರು : ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಳಿ ಬೈಕ್ ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.
ಮೃತನನ್ನು ಉತ್ತರ ಪ್ರದೇಶ ಮೂಲದ ಸುರೇಶ ಕುಮಾರ ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಸ್ಟೇಷನ್ ಮಂತ್ರಾಲಯದ ರಸ್ತೆಯ ಕಡೆಗೆ ಹೊರಟಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ