ರಾಯಚೂರು | ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು : ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಸಾಂದರ್ಭಿಕ ಚಿತ್ರ | PC: Meta AI
ಕಲಬುರಗಿ : ವಿದ್ಯುತ್ ಕಂಬದ ಮೇಲೆ ಹತ್ತಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಹಿರೇಕೊಟ್ಟೆಕಲ್ ಗ್ರಾಮದಲ್ಲಿ ಬುಧವಾರ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಹಮ್ಮದ್ ರಫಿ (45) ಎಂದು ಗುರುತಿಸಲಾಗಿದೆ.
ಗ್ರಾಮದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಿದ್ದು, ದುರಸ್ತಿ ಕಾರ್ಯಕ್ಕೆ ಜೆಸ್ಕಾಂ ಸಿಬ್ಬಂದಿ ತಾನು ಕಂಬದ ಮೇಲೆ ಹತ್ತದೆ ಖಾಸಗಿ ಎಲೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ ಮಹಮ್ಮದ್ ರಫಿ ಅವರನ್ನು ಕಂಬದ ಹತ್ತಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕುಟುಂಬಸ್ಥರಿಂದ ಪ್ರತಿಭಟನೆ :
ವಿದ್ಯುತ್ ದುರಸ್ತಿ ಕಾರ್ಯಕ್ಕೆ ಜೆಸ್ಕಾಂ ಸಿಬ್ಬಂದಿ ತಾನು ಕಂಬದ ಮೇಲೆ ಹತ್ತದೆ ಮಹಮ್ಮದ್ ರಫಿ ಅವರನ್ನು ಕಂಬದ ಹತ್ತಿಸಿ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಮಾನ್ವಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮೃತ ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಸ್ಥರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.