ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.16ರಂದು ಪಾದಯಾತ್ರೆ

Update: 2024-12-12 11:53 GMT

ರಾಯಚೂರು : ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.16 ರಂದು ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣ ಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವೈ. ಬಸವರಾಜ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಟನ್ ಕಬ್ಬಿಗೆ ಕನಿಷ್ಠ 5,500 ರೂ. ಬೆಲೆ ನಿಗದಿಪಡಿಸಬೇಕು. 2021 -22 ಸಾಲಿನಲ್ಲಿ ಟನ್ ಗೆ 150 ರೂ. ಹಳೇ ಬಾಕಿಯನ್ನು ಕೋರ್ಟ್ ಆದೇಶವಿದ್ದರೂ ರೈತರಿಗೆ ತಲುಪಿಲ್ಲ. ಇದು ಈ ಕೂಡಲೇ ತಲುಪಲು ಆದೇಶವಾಗಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರವನ್ನು ನಿಲ್ಲಿಸಬೇಕು. ನೈಜವಾಗಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಬ್ರಿಟಿಷರ ಕಾಲದ ಗ್ರಾಮ ಠಾಣಾ ವ್ಯಾಪ್ತಿ ವಿಸ್ತಾರವಾಗಬೇಕು. ಗ್ರಾಮಗಳ ವ್ಯಾಪ್ತಿ ವೈಜ್ಞಾನಿಕ ಸರ್ವೇ ಮಾಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಅನಿತಾ ನವಲಕಲ್, ಹುಲಿಗೆಯ್ಯ ತಿಮ್ಮಾಪುರ, ಚನ್ನಪ್ಪ, ಒಡೆಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News