ರಾಯಚೂರು | ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಚಿವ ಎನ್.ಎಸ್.ಬೋಸರಾಜು ಸಂತಾಪ
ರಾಯಚೂರು : ಹತ್ತು ವರ್ಷಗಳ ಕಾಲ ದೇಶ ಮುನ್ನಡೆಸಿ ದೇಶದಲ್ಲಿ ಆರ್ಥಿಕ ಸುಧಾರಣೆಗಳ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ಅತ್ಯಂತ ದುಖಃವಾಗಿದೆ. ದೇಶದ ಅಭಿವೃದ್ದಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ, ಭೂಸ್ವಾಧೀನ ಕಾಯಿದೆ ಹಾಗೂ ಅರಣ್ಯ ಹಕ್ಕು ಕಾಯಿದೆಗಳ ಮೂಲಕ ಜನ ಸಾಮಾನ್ಯರಿಗೆ ಅನುಕೂಲವಾಗುವ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಖ್ಯಾತಿ ಡಾ.ಮನಮೋಹನ ಸಿಂಗ್ ಅವರಿಗೆ ಸಲ್ಲುತ್ತದೆ ಎಂದರು.
ಗ್ರಾಮೀಣ ಪ್ರದೇಶದಿಂದ ಗುಳೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಡಾ.ಸಿಂಗ್ ಜಾರಿ ತಂದ ಮನ್ರೇಗಾ ಯೋಜನೆ ಕ್ರಾಂತಿಕಾರಿ ಯೋಜನೆಯಾಗಿದೆ ಎಂದು ಹೇಳಿದರು.
ತಳಮಟ್ಟದ ಜನರ ಏಳ್ಗೆಯ ಬಗ್ಗೆ ಅತೀವ ಕಾಳಜಿಯನ್ನು ಹೊಂದಿದ್ದ ಅವರು, ದೇಶದ ಅಭಿವೃದ್ದಿಗೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಇವರ ನಿಧನದಿಂದಾಗಿ ದೇಶ ಅತ್ಯುತ್ತಮ ಆರ್ಥಿಕ ತಜ್ಞ ಹಾಗೂ ಸರಳ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಮತ್ತು ನೆಮ್ಮದಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.