ರಾಯಚೂರು | ಹಣ ದುರ್ಬಳಕೆ ಆರೋಪ : ಬಿಇಒ ಅಮಾನತು

Update: 2024-12-08 16:41 GMT

ರಾಯಚೂರು : ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಟ್ಟಿ ಚಿನ್ನದ ಗಣಿ ಕಂಪನಿ ನೀಡಿದ ಸಿಎಸ್ಆರ್ ಅನುದಾನ ದುರ್ಬಳಕೆ, ಭ್ರಷ್ಟಾಚಾರ, ಕರ್ತವ್ಯ ಲೋಪ ಮತ್ತು ಸೇವಾ ನಿರ್ಲಕ್ಷ್ಯ ಮಾಡಿದ ಆರೋಪ ತನಿಖೆ ವೇಳೆ ಸಾಬೀತಾದ ಹಿನ್ನೆಲೆಯಲ್ಲಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಅಮಾನತು ಮಾಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಮತ್ತು ಸಾಕ್ಷರತೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪಈ ಸಂಬಂಧ ಆದೇಶ ಹೊರಡಿಸಿದ್ದಾರೆ. 30 ಲಕ್ಷ ದುರುಪಯೋಗ ಪಡಿಸಿಕೊಂಡ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪಟ್ಟಣದ ಕಾಂಗ್ರೆಸ್ ಮುಖಂಡ ಟಿ.ಸುರೇಶನಾಯಕ ಅವರು ಸೆ.29ರಂದು ದೂರು ನೀಡಿದ್ದರು.

ದೂರು ಆದರಿಸಿ ತನಿಖೆ ಕೈಗೊಂಡು ವರದಿ ನೀಡುವಂತೆ ಕಲಬುರಗಿ ವಿಭಾಗೀಯ ಆಯುಕ್ತರಿಗೆ ಸೂಚಿಸಲಾಗಿತ್ತು. ರಾಯಚೂರು ಜಿಲ್ಲೆಗೆ ಭೇಟಿ ನೀಡಿ ಕೂಲಂಕುಶ ತನಿಖೆ ನಡೆಸಿ ನೀಡಿದ ಪ್ರಾಥಮಿಕ ವಿಚಾರಣೆ ವರದಿಯಲ್ಲಿ 4 ಆರೋಪಗಳಾದ ಹಣಕಾಸು ದುರ್ಬಳಕೆ, ಭ್ರಷ್ಟಾಚಾರ, ಕರ್ತವ್ಯ ಲೋಪ ಮತ್ತು ಸೇವಾ ನಿರ್ಲಕ್ಷ್ಯ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿನ ಕಾರ್ಯದರ್ಶಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News