ರಾಯಚೂರು ನಗರಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

Update: 2024-11-26 04:41 GMT

ರಾಯಚೂರು: ರಾಯಚೂರು ನಗರಸಭೆಯ ವಾರ್ಡ್ ಸಂಖ್ಯೆ 31ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜನಮ್ಮ ಗೆಲುವು ಸಾಧಿಸಿದ್ದಾರೆ.

ಇಂದು ರಾಯಚೂರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಮತ ಎಣಿಕೆ ಮುಕ್ತಾಯದ ನಂತರ ಚುನಾವಣಾಧಿಕಾರಿ ಬಿ.ವೈ.ವಾಲ್ಮೀಕಿ ಹಾಗೂ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಸಮ್ಮುಖದಲ್ಲಿ ಚುನಾವಣಾ ಫಲಿತಾಂಶ ಪ್ರಕಟಿಸಲಾಯಿತು. ವಿಜೇತ ಅಭ್ಯರ್ಥಿ ಅಂಜನಮ್ಮರಿಗೆ ಇದೇವೇಳೆ ಪ್ರಮಾಣ ಪತ್ರ ನೀಡಿದರು.

282 ಮತಗಳ ಅಂತರದ ಗೆಲುವು: ಇವಿಎಂ ಮತಗಳ ಮತಪತ್ರ ಎಣಿಕೆ ಕಾರ್ಯ ಮುಕ್ತಾಯದ ನಂತರ ಅಭ್ಯರ್ಥಿ ಅಂಜನಮ್ಮ 1268 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಗಿರಿಜಾ ರಾಘವೇಂದ್ರ 986 ಮತಗಳನ್ನು ಪಡೆದರು. ಗೆಲುವಿನ ಅಂತರ 282 ಮತಗಳು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಗರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದ ರೇಣುಕಾ ಭೀಮರಾಯ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಸದಸ್ಯ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News