ರಾಯಚೂರು | ನಲ್ ಜಲ್ ಮಿತ್ರ ಯೋಜನೆ ಮಹಿಳೆಯರ ಸ್ವ-ಉದ್ಯೋಗಕ್ಕೆ ಅವಕಾಶ : ಡಾ.ಟಿ.ರೋಣಿ

Update: 2025-01-04 14:47 GMT

ರಾಯಚೂರು : ಜಿಲ್ಲೆಯಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ವಿವಿಧ ತರಬೇತಿ ನೀಡಿ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಅವರು ಹೇಳಿದರು.

ಇಂದು ನಗರದ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಜಿಲ್ಲಾ ಪಂಚಾಯತ್ ರಾಯಚೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ನೀರು ವಿತರಣಾ ನಿರ್ವಾಹಕರಿಗೆ ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ನಲ್ ಜಲ್ ಮಿತ್ರ ಯೋಜನೆಯಡಿ ನೀರು ವಿತರಣಾ ನಿರ್ವಾಹಕರಿಗೆ ಬಹು ಕೌಶಲ್ಯ ತರಬೇತಿ ಪಡೆಯುತ್ತಿರುವ ಮಹಿಳೆಯರು ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತರಬೇತಿಯಲ್ಲಿ ವಿತರಿಸಲಾಗುವ ಕಿಟ್ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸುವಾಗ ಸಹಕಾರಿಯಾಗುತ್ತದೆ. ಮಹಿಳೆಯರಿಗೆ ನಲ್ಲಿ ನೀರಿನ ವಿತರಣಾ ವ್ಯವಸ್ಥೆ ಮತ್ತು ನೀರಿನ ವ್ಯವಸ್ಥೆಯ ಪ್ರಾತ್ಯಕ್ಷಿಕೆ, ನೀರಿನ ಪಂಪುಗಳ ಕಾರ್ಯ, ಪಂಪ್ಗಳ ಅಳವಡಿಕೆ, ಪ್ರಾತ್ಯಕ್ಷಿಕೆಗಳ ಮೂಲಕ ತರಬೇತಿ ನೀಡಲಾಗಿದೆ. ನೀರು ಸಂಪ್, ಟ್ಯಾಂಕ್ ನಲ್ಲಿ ನೀರು ನಿರ್ವಹಣೆ, ಅದರ ಕಾರ್ಯಗಳ ಬಗ್ಗೆ ಪ್ರಾಯೋಗಿಕವಾಗಿ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜಿ.ಹುಡೇದ್, ಸಂಸ್ಥೆಯ ಪ್ರಭಾರ ಪ್ರಾರ್ಚಾಯರಾದ ನಾಗೋಜಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರರಾದ ಬಸವರಾಜ್, ಎನ್.ಆರ್.ಎಲ್.ಎಮ್. ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ, ಸಂಪನ್ಮೂಲ ಅಧಿಕಾರಿಗಳಾದ ನಾಗರಾಜ್, ಕಾರ್ಯಕ್ರಮದ ಉಸ್ತುವಾರಿಗಳಾದ ಸದಾಶಿವಪ್ಪ , ನರಸಿಂಹಮೂರ್ತಿ, ಪ್ರಕಾಶ, ಅಬ್ದುಲ್, ಹಮೀದ್ ಸೇರಿದಂತೆ ಮಾನವಿ, ಸಿರವಾರ, ರಾಯಚೂರು ತಾಲ್ಲೂಕು ನಲ್ ಜಲ್ ಮಿತ್ರ ಸದಸ್ಯರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News