ರಾಯಚೂರು | ನ.27ರಿಂದ 3 ದಿನ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ

Update: 2024-11-22 14:16 GMT

ರಾಯಚೂರು : ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ವತಿಯಿಂದ ನ.27ರಿಂದ ದೆಹಲಿಯಲ್ಲಿ ಮೂರು ದಿನಗಳ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಶಿಲ್ಪಾ ಬಿ.ಕೆ. ತಿಳಿಸಿದ್ದಾರೆ.

ಪತ್ರಿಕಾ ಭವನದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಿಸುವ ಬದಲು ಗೊಂದಲ, ಮೌಢ್ಯ ಬಿತ್ತುವ ಕೆಲಸ ಮಾಡಿ ಸಾಂಸ್ಕೃತಿಕ ಅಧಃಪತನಗೊಳಿಸುತ್ತಿದೆ. ಶಿಕ್ಷಣ ವ್ಯಾಪಾರಿಕರಣವಾಗಿ ಸರಕಾರಿ ಶಾಲೆಗಳು ದುಸ್ಥಿತಿಗೆ ತಲುಪಿವೆ. ಮಕ್ಕಳಲ್ಲಿ ವೈಜ್ಞಾನಿ ಮನೋಭಾವನೆ ಹಾಗೂ ಸಾಮಾಜಿಕ ಚಿಂತನೆ ಮೂಡಿಸಬೇಕಿದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿ(ಎನ್ ಇಪಿ) ಕರ್ನಾಟಕ ರಾಜ್ಯದಲ್ಲಿ ರದ್ದಾಗಿದೆ ಆದರೂ ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಸರಕಾರಿ ಶಾಲೆಗಳು ಮೂಲಸೌಕರ್ಯವಿಲ್ಲದೇ ಮುಚ್ಚುವಂತಾಗಿದೆ. ಬಿಜೆಪಿ ಜಾರಿಗೊಳಿಸಿದ ಯೋಜನೆಗಳು, ನೀತಿಗಳನ್ನೇ ರಾಜ್ಯ ಸರಕಾರ ಮುಂದುವರೆಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ವ್ಯವಸ್ಥೆಯ ಕುರಿತು ಚರ್ಚೆಗಳು, ಸಂವಾದ, ಗೋಷ್ಠಿಗಳು ಈ ಸಮ್ಮೇಳನದಲ್ಲಿ ನಡೆಯಲಿದ್ದು ದೇಶದ ವಿವಿಧ ರಾಜ್ಯಗಳಿಂದ 500ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ವಿದ್ಯಾರ್ಥಿ ಮುಖಂಡ ಪೀರ್ ಸಾಬ್, ಬಸವರಾಜ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News