ರಾಯಚೂರು | ಪಿಡಿಒ ಮರು ಪರೀಕ್ಷೆ: ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆ

Update: 2024-11-20 11:02 GMT

ರಾಯಚೂರು : ಜಿಲ್ಲೆಯ ಸಿಂಧನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಿಡಿಒ ಪರೀಕ್ಷೆ ನಿರ್ವಹಣೆ ಮಾಡುವಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾರತ ಕ್ರಾಂತಿಕಾರಿ ಯುವ ಜನ ಒಕ್ಕೂಟ (RYFI ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಲೋಕಸೇವಾ ಆಯೋಗದಿಂದ ಭಾನುವಾರ ಸಿಂಧನೂರು ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ನಡೆದ ಪಿಡಿಒ ಹುದ್ದೆಗಳ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೆಲ ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದರು.

ಪ್ರತಿಭಟನಾ ನಿರತರು ಮಾತನಾಡಿ, ಕೂಡಲೇ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಲೋಪ ಎಸಗಿದ ಹಾಗೂ ದಾಂಧಲೆ ನಡೆಸಿ ಅಭ್ಯರ್ಥಿಗಳಿಗೆ ತೊಂದರೆ ಉಂಟು ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಅಜೀಜ ಜಾಗೀರದಾರ, ರವಿಚಂದ್ರ, ಅಡಿವಿ ರಾವ್ ಕಾರ್ಮಿಕ ಮುಖಂಡರು , ರವಿಚಂದ್ರ RYFI ಮುಖಂಡರು , ಸೈಯದ್ ಅಬ್ಬಾಸ್ ಅಲಿ ರೈತ ಮುಖಂಡರು , ಹನೀಫ್ ಅಬಕಾರಿ, ಶಫಿ, ನಲ್ಲಾರೆಡ್ಡಿ, ನರಸಪ್ಪ, ನಾಗರಾಜ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News