ರಾಯಚೂರು | ದೇವರ ದಾಸಿಮಯ್ಯ ಜಯಂತಿಯ ಪೂರ್ವಭಾವಿ ಸಭೆ

Update: 2025-03-21 18:29 IST
Photo of Metting
  • whatsapp icon

ರಾಯಚೂರು : ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ದೇವರ ದಾಸಿಮಯ್ಯ ಅವರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿ ಆಚರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ತಿಳಿಸಿದರು.

ಮಾ.21ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ಅವರು ಹೇಳಿದರು.

ಏ.2ರಂದು ದೇವರ ದಾಸಿಮಯ್ಯ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಅಂದು ಮೆರವಣಿಗೆ ಪ್ರಾರಂಭವಾಗುವ ಸ್ಥಳವಾದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶಾಮಿಯಾನ ಸ್ವಚ್ಛತೆ ಹಾಗೂ ಚೇರ್‌ಗಳ ವ್ಯವಸ್ಥೆ ಹಾಗೂ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವಾದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ, ವೇದಿಕೆ ನಿರ್ಮಾಣ ಸೇರಿದಂತೆ ಇತರೆ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಅಲ್ಲದೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಸರ್ಕಾರಿ ಇತರೆ ಕಚೇರಿಗಳಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ, ಸಮಾಜದ ಮುಖಂಡರಾದ ಪಿ.ಗೋವಿಂದರಾಜ್, ಮ್ಯಾಕ್ಸೆವೇಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ವನಜಾ, ದೊಡ್ಡ ವಿರೇಶ, ನಾರಾ ವೆಂಕಟೇಶ್, ವಿನಿ ಉದಯ, ಗಾಯಿತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News