ರಾಯಚೂರು: ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಪ್ರತಿಭಟನೆ

Update: 2024-12-28 15:24 GMT

ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಿರುವುದನ್ನು ಖಂಡಿಸಿ ಸಿಂಧನೂರಿನ ಐಬಿಯಿಂದ ತಹಸಿಲ್ದಾರರ ಕಛೇರಿವರೆಗೆ ಕಾಲ್ನಡಿಗೆ ರ್ಯಾಲಿ ನಡೆಸಿ ಬಳಿಕ ತಹಶೀಲ್ದಾರರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಿಂಧನೂರಿನ ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೀದಿ ಬದಿಯ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಂದನೂರಿನಲ್ಲಿ ಇಂತಹ ಬೃಹತ್ ಪ್ರಮಾಣದಲ್ಲಿ ಒಕ್ಕಲೆಬ್ಬಿಸಿರಲಿಲ್ಲ.‌ ಅನೇಕ ವರ್ಷಗಳಿಂದ ವಿವಿಧ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದ ಬಡವರನ್ನು ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ತೆರವು ಕಾರ್ಯಾಚರಣೆ ನಡೆಸಿದ್ದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಜಿಲ್ಲಾಡಳಿತ ಸಂಭಂಧಿಸಿದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News