ರಾಯಚೂರು | ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

Update: 2024-12-20 09:41 GMT

ರಾಯಚೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ನಲ್ಲಿ ಅಶ್ಲೀಲ ಪದ ಬಳಸಿದ್ದಾರೆ ಎಂಬ ಅರೋಪದಡಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಆರೋಪದಡಿ ಗುರುವಾರ ರಾತ್ರಿ ಹಿರೇಬಾಗೇವಾಡಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಮಾಡಿಲ್ಲ ಕಾಂಗ್ರೆಸ್ ಗುಂಡಾ ವರ್ತನೆಯಿಂದ ಅವರನ್ನು ಬಂಧನ ಮಾಡಲಾಗಿದೆ ಎಂದು ಆರೋಪಿಸಿದರು.

ಕೂಡಲೇ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಬೇಕು ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸದನದೊಳಗೆ ನಡೆದ ಘಟನೆಯೊಂದರ ದೂರಿನ ಆಧಾರದ ಮೇಲೆ ಸಿ.ಟಿ.ರವಿ ಅವರನ್ನು ಬಂಧಿಸಿರುವುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೆಲಸ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ರಾಜುಕುಮಾರ, ರವೀಂದ್ರ ಜಾಲ್ದಾರ್, ವಿಜಯಕುಮಾರ ಸಜ್ಜನ್, ರಾಮಚಂದ್ರ, ನಾಗರಾಜ್ ರಾಜೇಶ್ವರಿ ಗೋಪಿಶೆಟ್ಟಿ, ಮಲ್ಲಿಕಾರ್ಜುನ್, ವಿಜಯ ಭಾಸ್ಕರ್ ಇಟಗಿ, ರಾಮಚಂದ್ರ ಕಡಗೋಲ್, ಪಾಲ್ಗೊಂಡಿದ್ದರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News