ರಾಯಚೂರು | ಭಿಕ್ಷಾಟನೆಯಲ್ಲಿ ತೊಡಗಿದ್ದ 10 ಮಕ್ಕಳ ರಕ್ಷಣೆ

Update: 2024-12-10 15:53 GMT

ರಾಯಚೂರು : ನಗರದ ಕೇಂದ್ರ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಿಕ್ಷಾಟನೆ, ಚಿಂದಿ ಆಯುವ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಕಾರ್ಯಾಚರಣೆ ನಡೆಸಿ 10 ಮಕ್ಕಳನ್ನು ರಕ್ಷಿಸಿ ಬಾಲ ಮಂದಿರಕ್ಕೆ ಸೇರಿಸಲಾಯಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕವು 0-18ವರ್ಷದ ಪೋಷಣೆ ಮತ್ತು ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ ಮಾರ್ಗದರ್ಶನದಲ್ಲಿ ಮಂಗಳವಾರ ಬೆಳಿಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ ಘಟಕದ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿ 9 ಬಾಲಕಿಯರು ಹಾಗೂ 1 ಬಾಲಕ ಸೇರಿದಂತೆ ಒಟ್ಟು 10ಮಕ್ಕಳನ್ನು ರಕ್ಷಿಸಿ ಸರ್ಕಾರಿ ಬಾಲಮಂದಿರಗಳಿಗೆ ದಾಖಲಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಪೋಲೀಸ್ ವಿಶೇಷ ಮಕ್ಕಳ ಘಟಕದ ಬಸವರಾಜ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ನಿರ್ದೇಶಕ ಮಂಜುನಾಥ ರೆಡ್ಡಿ, ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮೀರೆಡ್ಡಿ, ರಕ್ಷಣಾಧಿಕಾರಿ ಕಿರಲಿಂಗಪ್ಪ, ಕಾನೂನು ಪರಿವೀಕ್ಷಣಾಧಿಕಾರಿ ಶಿವರಾಜ, ಸಮಾಜಿಕ ಕಾರ್ಯಕರ್ತ ತಿಕ್ಕಯ್ಯ, ದಿನೇಶ ಕುಮಾರ್ ಔಟ್ರಿಚ್ ವರ್ಕರ್, ಈರಮ್ಮ ಔಟ್ರಿಚ್ ವರ್ಕರ್ ಮತ್ತು ದೇವಮ್ಮ, ಬಜಾರ ಪೊಲೀಸ್ ಠಾಣೆಯ ಪಿಸಿ ವೆಂಕಣ್ಣ ಭೋವಿ, ಪಶ್ಚಿಮ ಪೊಲೀಸ್ ಠಾಣೆ ಪಿಸಿ ವೈ.ಸುರೇಶ ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News