ರಾಯಚೂರು | ಉಗ್ರರ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ : ಕಾಂಗ್ರೆಸ್ ಪ್ರತಿಭಟನೆ

Update: 2025-04-23 18:00 IST
Photo of Protest
  • whatsapp icon

ರಾಯಚೂರು : ಕಾಶ್ಮೀರದ ಪೆಹಲ್ಗಾಮ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಿಗರು ಮೃತಪಟ್ಟಿದ್ದು, ಇದಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಆರೊಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿ ಖಂಡನೀಯ. ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಈ ದಾಳಿಗೆ ಕಾರಣ ಎಂದು ಜಿಲ್ಲಾ ಯೂತ್ ಕಾಂಗ್ರೆಸ್‍ ಕಾರ್ಯಕರ್ತರು ಆರೋಪಿಸಿದರು.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 27 ಅಧಿಕ ಜನರು ಮೃತಪಟ್ಟಿದ್ದು, ಭದ್ರತಾ- ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಭದ್ರತೆಯಲ್ಲಿ ವಿಫಲವಾಗಿದ್ದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಯೂತ್ ಕಾಂಗ್ರೆಸ್ ರಾಜ್ಯ ಮುಖಂಡ ಫೈಝಲ್ ಖಾನ್ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಜನ ಮೃತಪಟ್ಟಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ನೇರವಾಗಿ ಹೊಣೆ ಹೊರಬೇಕು. ಪ್ರಶಾಂತವಾಗಿದ್ದ ಕಾಶ್ಮೀರ ಈಗ ಮತ್ತೆ ಉಗ್ರರ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದ್ದರಿಂದ ಉಗ್ರರು ದಾಳಿ ನಡೆಸುವಂತಾಗಿದೆ ಎಂದು ದೂರಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ರಾಜ್ ಮುಖಂಡ ಹುಸೇನ್ ಬಾಷ ಸೈವಾಜ್, ಗೌಸ್, ಮಹ್ಮದ್ ಅನೀಫ್, ಖಾಜಾ ಅಸ್ಲಂ, ಮುಹಮ್ಮದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News