ರಾಯಚೂರು | ಒಳ ಮೀಸಲಾತಿಗಾಗಿ ಮಾ.23 ರಂದು ವಿಚಾರ ಸಂಕಿರಣ ; ರವೀಂದ್ರ ನಾಥ್ ಪಟ್ಟಿ

ರಾಯಚೂರು : ಮಾ.23 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಸಂತನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಒಳ ಮೀಸಲಾತಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಮಾಲಾ, ಬೇಗಾರ್, ಬ್ಯಾಗಾರ ಸಮಿತಿ ಜಿಲ್ಲಾ ಘಟಕದ ಸಂಚಾಲಕ ರವೀಂದ್ರ ನಾಥ್ ಪಟ್ಟಿ ತಿಳಿಸಿದರು.
ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳ ಮಿಸಲಾತಿ ಜಾರಿಗೆ ನಮ್ಮ ತಕರಾರಿಲ್ಲ ಬದಲಾಗಿ ನ್ಯಾಯಯುತ ಮೀಸಲಾತಿ ಸಿಗಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಚಲುವಾದಿ ಸಮುದಾಯ ಒಳಮೀಸಲಾತಿ ವಿರುದ್ಧವಿಲ್ಲ. ಚಲುವಾದಿಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಮುದಾಯದ ಕೆಲ ನಾಯಕರು ತಮ್ಮ ರಾಜಕೀಯ ಅಸ್ತಿತ್ವಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಮಾಜದ ಬಗ್ಗೆ ಕಳಕಳಿಯಿಲ್ಲವೆಂಬ ನೋವು ನಮ್ಮನ್ನು ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು
ವಿಚಾರ ಸಂಕಿರಣದ ಕಾರ್ಯಕ್ರಮದಲ್ಲಿಯೇ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್.ಎನ್.ನಾಗಮೋಹನದಾಸ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಮುಖಂಡರಾದ ಭಾಸ್ಕರರಾಜ, ನರಸಿಂಹಲು ನಲಹಾಳ, ಬಸವರಾಜ, ರಾಜು ಪಟ್ಟಿ, ತಮ್ಮಣ್ಣ, ಯಲ್ಲಪ್ಪ ಉಪಸ್ಥಿತರಿದ್ದರು.