ರಾಯಚೂರು | ಕವಿ ಡಾ.ಸಿದ್ದಲಿಂಗಯ್ಯ ಅವರ ಬದುಕು ಬರಹ ಕುರಿತು ವಿಚಾರ ಸಂಕಿರಣ

ರಾಯಚೂರು : ದಿಟ್ಟ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ಬದುಕು- ಬರಹ ಕುರಿತು ವಿಚಾರ ಸಂಕಿರಣವನ್ನು ಸರಕಾರಿ ನೌಕರರ ಮನೋರಂಜನಾ ಸಂಘದಲ್ಲಿ ಮಾ.23 ರಂದು ರವಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಎಸ್.ಸಿ/ಎಸ್.ಟಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಜಿಂದಪ್ಪ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಎಸ್.ಸಿ/ಎಸ್.ಟಿ ಸಮನ್ವಯ ಸಮಿತಿ ಜಿಲ್ಲಾ ಘಟಕ ರಾಯಚೂರು, ಹೊಸಮನಿ ಪ್ರಕಾಶನ ರಾಯಚೂರು ಸಹಯೋಗದಲ್ಲಿ ಹಮ್ಮಿಕೊಂಡಿರುವ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ಬಾಬು ಭಂಡಾರಿಗಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ತಾವು ವಹಿಸಿಕೊಳ್ಳುವುದಾಗಿ ತಿಳಿಸಿದ ಅವರು, ಡಾ. ಸಿದ್ದಲಿಂಗಯ್ಯ ಬದುಕು- ಬರಹ ಕುರಿತು ಯುವ ಕವಿ, ವ್ಯಂಗ್ಯ ಚಿತ್ರಕಾರ ಈರಣ್ಣ ಬೆಂಗಾಲಿ ಮಾತನಾಡಲಿದ್ದು, ಡಾ. ಸಿದ್ದಲಿಂಗಯ್ಯ ಅವರ ಸಾಮಾಜಿಕ ಹೋರಾಟಗಳು ಹಾಗೂ ಸಾಂಸ್ಕೃತಿಕ ಕೊಡುಗೆಗಳು ಕುರಿತು ಪತ್ರಕರ್ತ ಅಣ್ಣಪ್ಪ ಮೇಟಿ ಉಪನ್ಯಾಸ ನೀಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಾ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ತಾಯರಾಜ್, ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸರಕಾರಿ ನೌಕರರ ಎಸ್.ಸಿ/ಎಸ್.ಟಿ ಸಮನ್ವಯ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಂದಿನಿ, ತಾಲೂಕಾಧ್ಯಕ್ಷ ರಾಘವೇಂದ್ರ, ಹೊಸಮನಿ ಪ್ರಕಾಶನದ ಅಧ್ಯಕ್ಷ ಬಶೀರ್ ಅಹ್ಮದ್, ರುದ್ರಯ್ಯ ಗುಣಾರಿ ಪತ್ರಿಕಾಗೋಷ್ಠಿಯಲ್ಲಿದ್ದರು.