ರಾಯಚೂರು | ಸಮಾಜ ಕಲ್ಯಾಣ ಇಲಾಖೆ; ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ರಾಯಚೂರು : ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯಿಂದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಕಾಯ್ದೆ 1989 ತಿದ್ದುಪಡಿ ಅಧಿನಿಯಮ, 2015 ತಿದ್ದುಪಡಿ ಅಧಿನಿಯಮ ಮತ್ತು 2016 ನಿಯಮಗಳನ್ವಯ ಉಪ-ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಹೊಸ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಕಂದಾಯ ಉಪ-ವಿಭಾಗದಲ್ಲಿ ಸುಮಾರು ವರ್ಷಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದ ಏಳ್ಗೆಗಾಗಿ ಹಾಗೂ ಸದರಿಯವರ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಶ್ರಮಿಸಿದ ಪರಿಶಿಷ್ಟ ಜಾತಿ ಅಥವಾ ಪಂಗಡದ ಜನಾಂಗದ ವಿವಿಧ ಸಂಘಟನೆಗಳ ಮುಖಂಡರು ಮತ್ತು ಪರಿಶಿಷ್ಟ ಪಂಗಡ ಜನಾಂಗದ ಏಳ್ಗೆಗಾಗಿ ಶ್ರಮಿಸಿದ ಇತರೆ ಸಂಸ್ಥೆಗಳ ಆಸಕ್ತಿಯುಳ್ಳ ಅಧ್ಯಕ್ಷರು ಅಥವಾ ಪದಾಧಿಕಾರಿಗಳು ಮಾ.24ರ ಸಂಜೆ 5 ಗಂಟೆಯೊಳಗಾಗಿ ಈ ಕಚೇರಿಗೆ ಖುದ್ದಾಗಿ ಸ್ವ-ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.