ರಾಯಚೂರು | ಎಸೆಸೆಲ್ಸಿ ಪರೀಕ್ಷೆ : 1,232 ವಿದ್ಯಾರ್ಥಿಗಳು ಗೈರು

ಸಾಂದರ್ಭಿಕ ಚಿತ್ರ
ರಾಯಚೂರು : ಜಿಲ್ಲೆಯಲ್ಲಿ ಎ.4ರ ಶುಕ್ರವಾರದಂದು ಜಿಲ್ಲೆಯ 97 ಕೇಂದ್ರಗಳಲ್ಲಿ ಹಿಂದಿ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು.
ದೇವದುರ್ಗ, ಲಿಂಗಸುಗೂರ, ಮಾನ್ವಿ, ರಾಯಚೂರು ಹಾಗೂ ಸಿಂಧನೂರು ಸೇರಿ ಜಿಲ್ಲೆಯಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಒಟ್ಟು 31,471 ವಿದ್ಯಾರ್ಥಿಗಳ ಪೈಕಿ 30,239 ವಿದ್ಯಾರ್ಥಿಗಳು ಹಾಜರಾಗಿದ್ದು, 1,232 ವಿದ್ಯಾರ್ಥಿಗಳು ಗೈರಾದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತವೆಂದು ಘೋಷಿಸಲಾಗಿತ್ತು.
ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 4,364 ವಿದ್ಯಾರ್ಥಿಗಳ ಪೈಕಿ 4,250 ವಿದ್ಯಾರ್ಥಿಗಳು ಹಾಜರಾಗಿದ್ದು, 114 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಲಿಂಗಸೂಗೂರು ತಾಲೂಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 6,530 ವಿದ್ಯಾರ್ಥಿಗಳ ಪೈಕಿ 6,314 ವಿದ್ಯಾರ್ಥಿಗಳು ಹಾಜರಾಗಿದ್ದು, 216 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಮಾನ್ವಿ ತಾಲೂಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,826 ವಿದ್ಯಾರ್ಥಿಗಳ ಪೈಕಿ 5,511 ವಿದ್ಯಾರ್ಥಿಗಳು ಹಾಜರಾಗಿದ್ದು, 315 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಯಚೂರು ತಾಲೂಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 9,077 ವಿದ್ಯಾರ್ಥಿಗಳ ಪೈಕಿ 8,690 ವಿದ್ಯಾರ್ಥಿಗಳು ಹಾಜರಾಗಿದ್ದು, 387 ವಿದ್ಯಾರ್ಥಿಗಳು ಗೈರಾಗಿದ್ಧಾರೆ.
ಸಿಂಧನೂರು ತಾಲೂಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,674 ವಿದ್ಯಾರ್ಥಿಗಳ ಪೈಕಿ 5,474 ವಿದ್ಯಾರ್ಥಿಗಳು ಹಾಜರಾಗಿದ್ದು, 200 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.