ರಾಯಚೂರು | ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ : ಡಾ.ಟಿ.ರೋಣಿ
ರಾಯಚೂರು : ದೇಶದಲ್ಲಿ ನಡೆಯುವ ಪ್ರತಿ ಚುನಾವಣೆಯಲ್ಲೂ ಅರ್ಹರು ತಪ್ಪದೆ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧಾ ಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರತಿಯೊಬ್ಬರೂ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಭಾರತ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪವಿತ್ರವಾದ, ನ್ಯಾಯ ಸಮ್ಮತ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ನಗರ, ಪಟ್ಟಣ, ಮಹಾನಗರಿಗಳಲ್ಲಿ ಮತದಾನದ ಪ್ರಮಾಣ ಇಳಿಕೆಯಾಗುತ್ತಿದ್ದು, ಯುವ ಮತದಾರರು ಎಲ್ಲರೂ ತಪ್ಪದೆ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಪಾತ್ರವಾಗಬೇಕು ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲ್ಲೂಕಿನ ಶಾಲಾ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಂದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಾದ ಪ್ರಬಂಧ, ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆ, ರೀಲ್ಸ್ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಗೆ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಕಳುಹಿಸಲಾಗುವುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಳಪ್ಪ ಬಡಿಗೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಸೋಮಶೇಖರಪ್ಪ ಹೋಕ್ರಣಿ, ರಾಯಚೂರು ಸ್ವೀಪ್ ನೋಡಲ್ ಅಧಿಕಾರಿ ವೈ.ಬಿ.ವಾಲ್ಮೀಕಿ, ರಾಯಚೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಮತದಾರರ ಸಾಕ್ಷರತ ಕಬ್ಲ್ ನೋಡಲ್ ಅಧಿಕಾರಿ ದಂಡಪ್ಪ ಬಿರಾದರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪ ಸಾವಿತ್ರಿ ಕೆ ಸೇರಿದಂತೆ ವಿವಿಧ ಶಾಲಾ ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.