ರಾಯಚೂರು | ಸುಪ್ರಿಂಕೋರ್ಟ್ ವಕೀಲ ದೇವಣ್ಣ ನಾಯಕ ನಿಧನ

Update: 2024-11-23 14:59 GMT

ದೇವಣ್ಣನಾಯಕ

ರಾಯಚೂರು : ಸುಪ್ರಿಂಕೋರ್ಟ್‌ನ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ದೇವಣ್ಣನಾಯಕ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಬ್ಬರು ಪುತ್ರರು, ಪತ್ನಿ ಸೇರಿ ಅಪಾರ ಬಂಧುಗಳು, ಹಿತೈಷಿಗಳು, ಅಭಿಮಾನಿಗಳನ್ನು ಅಗಲಿದ್ದಾರೆ. ಸುಮಾರು ವರ್ಷಗಳಿಂದ ಕಾಂಗ್ರೆಸ್ ಮುಖಂಡರಾಗಿ ಸೇವೆ ಸಲ್ಲಿಸಿದ್ದ ಅವರು ಲೋಕಸಭಾ ಚುನಾವಣೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಮೃತರ ನಿಧನಕ್ಕೆ ಜಿಲ್ಲಾ ನ್ಯಾಯಾವಾದಿಗಳ ಸಂಘ ಸಂತಾಪ ಸೂಚಿಸಿದೆ. ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಿರಿಯ ವಕೀಲರು ಸಂತಾಪ ಸೂಚಿಸಿದ್ದಾರೆ. ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಂಸದ ಬಿ.ವಿ.ನಾಯಕ, ನಗರ ಶಾಸಕ ಡಾ.ಶಿವರಾಜ ಪಾಟೀಲ್ ಸೇರಿ ಅನೇಗ ಗಣ್ಯರು ಸಂತಾಪ ಸೂಚಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News