ರಾಯಚೂರು | ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ತರಬೇತಿ
ರಾಯಚೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ವೃತ್ತಿ ತರಬೇತಿ ಆಯೋಜಿಸಲಾಗಿದೆ.
8ನೇ ತರಗತಿ ವ್ಯಾಸಂಗ ಮಾಡಿರುವ, 18 ರಿಂದ 45 ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದ ಮಹಿಳೆಯರಿಗೆ ಬಿಪಿಎಲ್ ಕಾರ್ಡುದಾರರಿಗೆ ಈ ತರಬೇತಿಯು ಅನ್ವಯಿಸುತ್ತದೆ.
ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಸೌಕರ್ಯದ ವ್ಯವಸ್ಥೆ ಇರುತ್ತದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಬೆಳಿಗ್ಗೆ 9.30 ಗಂಟೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ), ಆಶಾಪೂರು ರಸ್ತೆ, ರಾಯಚೂರು ಈ ವಿಳಾಸದಲ್ಲಿ ಹಾಜರಾಗಬೇಕು. ಕೆಲವೇ ಸೀಟುಗಳು ಲಭ್ಯವಿರುತ್ತವೆ.
ಅರ್ಜಿ ಜೊತೆಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಫೋಟೊಸ್, ಬ್ಯಾಂಕ್ ಪಾಸ್‌ಬುಕ್, ಪ್ಯಾನ್ ಕಾರ್ಡ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: 8217382735 & 9742470999 ಸಂಪರ್ಕಿಸಬಹುದು ಎಂದು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.