ರಾಯಚೂರು: ವಿವಿಧ ಕಾಯ್ದೆಗಳ ತರಬೇತಿ ಕಾರ್ಯಾಗಾರಕ್ಕೆ ನ್ಯಾ. ಮಾರುತಿ ಬಾಗಡೆ ಚಾಲನೆ
ರಾಯಚೂರು: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2008, ಪೋಕೋ ಕಾಯ್ದೆ-2012 ಹಾಗೂ ದತ್ತು ಅಧಿನಿಯಮ ಕುರಿತು ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಶಿ ಬಾಗಡೆ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳ ಹಕ್ಕುಗಳ ಹಾಗೂ ಸಂರಕ್ಷಣೆ ಕಾಯ್ದೆಯಡಿ ಮಕ್ಕಳಿಗಾಗಿ ಇರುವ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಾಯ್ದೆಗಳನ್ನು ಮಕ್ಕಳಿಗೆ ತಿಳಿಸಬೇಕು ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ವಿವಿಧ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಎಚ್.ಎ.ಸಾತ್ವಿಕ್, ಅಪರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ.ಶಿವಕುಮಾರ್, ಮಕ್ಕಳ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ನವೀನ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಮಂಗಳ ಹೆಗಡೆ, ಪೊಲೀಸ್ ತರಬೇತಿದಾರರಾದ ರೋಹಿತ್ ಸಿ.ಜೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.