ರಾಯಚೂರು | ಮಾ.21ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ
ರಾಯಚೂರು : ತುಂಗಭದ್ರಾ ಯೋಜನೆಯ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸಲು 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಮಾ.21ರ ಅಪರಾಹ್ನ 4ಗಂಟೆಗೆ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣ, 3ನೇ ಮಹಡಿ, ವಿಧಾನಸೌಧ ಬೆಂಗಳೂರಿನಲ್ಲಿ ಜರುಗಲಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವವರಾದ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರ ಉಪಸ್ಥಿತಿ ವಹಿಸಲಿದ್ದು, ಸಚಿವರುಗಳು, ಲೋಕಸಭಾ ಸದಸ್ಯರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು, ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಮತ್ತು ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.