ರಾಯಚೂರು | ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದ್‌ಗೆ ವ್ಯಾಪಕ ಬೆಂಬಲ

Update: 2025-01-07 15:44 GMT

ರಾಯಚೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ಧಾರೆ ಎಂದು ಆರೋಪಿಸಿ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಮಂಗಳವಾರ ಸಂವಿಧಾನ ಹಿತರಕ್ಷಣಾ ವೇದಿಕೆ, ಪ್ರಗತಿಪರ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ದೇವದುರ್ಗ ಬಂದ್ ಹೋರಾಟ ಮಾಡಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವ್ಯಾಪರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಪಟ್ಟಣದ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ, ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು. ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಎಚ್ ಝಡ್ ಪಿ ಸರ್ಕಲ್ - ಅಂಬೇಡ್ಕರ್ ಸರ್ಕಲ್ ವರೆಗೆ ಅಮಿತ್ ಶಾ ಅವರ ಅಣಕು ಶವ ಯಾತ್ರೆ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂಬೇಡ್ಕರ್ ಅವರು ಎಲ್ಲ ವರ್ಗದ ಜನರಿಗೆ ಘನತೆ ಹಾಗೂ ಸಮಾನತೆಯನ್ನು ಖಾತ್ರಿ ಪಡಿಸಿದ್ದರು. ಅವರ ಕೊಡುಗೆಗಳನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆ ಅವರಿಗೆ ಅಲ್ಲದೇ ಸಂವಿಧಾನಕ್ಕೆ ಮಾಡುವ ಅವಮಾನ ಆಗಿದೆ. ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು ಹಿರಿಯ ದಲಿತ ಮುಖಂಡ ಎಂ.ಆರ್.ಬೇರಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

 

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News