ರಾಯಚೂರು: ಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆ
Update: 2025-01-12 11:15 GMT
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹಂಚಿನಾಳ (ಯು) ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಶನಿವಾರ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತಳನ್ನು ಶರಣಮ್ಮ ಹೇಮಣ್ಣ ನಾಯಕ ರತ್ನಪುರ ಹಟ್ಟಿ (55) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.
ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.