ರಾಯಚೂರು | ಗ್ರಾನೈಟ್ ಗಣಿಯಲ್ಲಿ ಸ್ಫೋಟ : ಓರ್ವ ಕಾರ್ಮಿಕ ಮೃತ್ಯು
Update: 2025-04-06 17:09 IST

ಸಾಂದರ್ಭಿಕ ಚಿತ್ರ
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರದ ಗ್ರಾನೈಟ್ ಗಣಿಯಲ್ಲಿ ಸ್ಫೋಟ ಸಂಭವಿಸಿ ಕಾರ್ಮಿಕನೊರ್ವ ಮೃತಪಟ್ಟಿದ್ದು, ಮತ್ತೊರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ವೆಂಕಟೇಶ ಎಂದು ಗುರುತಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆಯದೇ ಗ್ರಾನೈಟ್ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಲಿಂಗಸುಗೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.